Wednesday, June 29, 2022

Latest Posts

ಚಿಕ್ಕಬಳ್ಳಾಪುರದಲ್ಲಿ ಡಾ.ಅಂಬೇಡ್ಕರ್ ರ ಅಧ್ಯಯನ ಕೇಂದ್ರ ಸ್ಥಾಪನೆ: ಸಚಿವ ಸುಧಾಕರ್

ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಪುಣ್ಯ ತಿಥಿ ಆಚರಣೆಯ ಪ್ರಯುಕ್ತ ನಗರದ ಎಂ.ಜಿ ರಸ್ತೆಯ ಮೆಟ್ರಿಕ್ ನಂತರದ ಪದವಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ತತ್ವಗಳನ್ನು ಮತ್ತು ಆದರ್ಶಗಳನ್ನು ಇಂದಿನ ಭಾರತೀಯರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಭಾರತದ ಪರಿಕಲ್ಪನೆಯನ್ನು ಕಾಣಬಹುದೆಂದರು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ನೂರಮೂವತೈದು ಕೋಟಿ ಜನರಿಗೆ ಉಪಯೋಗವಾಗುವಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರವನ್ನು ಮಾಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಜಿ.ಪಂ. ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಸ್ಥಾಯಿ ಸಮಿತಿಯ ಅಧ್ಯಕ್ಷ ರಾಜಾಕಾಂತ್, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್ ಆನಂದ್ ರೆಡ್ಡಿ, ದಲಿತ ಸಮುದಾಯದ ಮುಖಂಡರು, ವಿವಿಧ ಸಂಘದ ಮುಖಂಡರು ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss