ಹೊಸದಿಗಂತ ಆನ್ ಲೈನ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯ ಹಿರೆನಾಗವೇಲಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಸ್ಫೋಟ ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಲು ತೀರ್ಮಾನಿಸಿರುವುದಾಗಿ ಹೇಳಿರುವ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸ್ಪೋಟ ಸಂಭವಿಸಿದ ಕ್ವಾರಿಗೆ ಮಂಗಳವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದಾಗಿ ಹೇಳಿದರು.
ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು. ಹೀಗಾಗಿ ಈ ಪ್ರಕರಣವನ್ನು ಸಿಐಡಿಗೆ ವಹಿಸಿಲು ತೀರ್ಮಾನಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.
ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ. ಈ ಪ್ರಕರಣದಲ್ಲಿ ನನ್ನ ಇಲಾಖೆಯಿಂದಲೇ ಕ್ರಮ ಆರಂಭಿಸುತ್ತೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.