Monday, August 15, 2022

Latest Posts

ಚಿಕ್ಕಬಳ್ಳಾಪುರ| ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿ 13 ಲಕ್ಷ ದೋಚಿದ ಕಳ್ಳರು

ಚಿಕ್ಕಬಳ್ಳಾಪುರ: ಸಿಸಿ ಕ್ಯಾಮೆರಾಗಳಿಗೆ ಪೇಯಿಂಟ್​ ಸ್ಪ್ರೇ ಮಾಡಿ ಎಟಿಎಂನಲ್ಲಿದ್ದ 13 ಲಕ್ಷ ರೂ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ನಡೆದಿದೆ‌.
ನಗರದ ಶಿಡ್ಲಘಟ್ಟ ರಸ್ತೆಯ ಸೈಂಟ್​ ಜೋಸೆಫ್ ಕಾನ್ವೆಂಟ್ ಶಾಲೆ ಬಳಿಯಿರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿದ ಕಳ್ಳರು ಸಿಸಿ ಕ್ಯಾಮರಾಗಳಿಗೆ ಪೇಯಿಂಟ್​​ ಸ್ಪ್ರೇ ಮಾಡಿ ಗ್ಯಾಸ್ ಕಟರ್​ನಿಂದ ಎಟಿಎಂ ಮೆಷಿನ್​ ಕಟ್ ಮಾಡಿ ಅಪಾರ ಪ್ರಮಾಣದ ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಬ್ಬಂದಿ ಎಟಿಎಂಗೆ ಹಣ ತುಂಬಲು ಬಂದಾಗ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಇನ್ನೂ ಬ್ಯಾಂಕ್ ಸಿಬ್ಬಂದಿ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳಕ್ಕೆ ಡಿವೈಎಸ್​ಪಿ ರವಿಶಂಕರ್ ಹಾಗೂ ಶ್ವಾನದಳ ಮತ್ತು ಬೆರಳಚ್ಚು ತಜ್ಙರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss