ಚಿಕ್ಕಬಳ್ಳಾಪುರ: ಪ್ರಯಾಣಿಕರು ಸಂಚಾರಕ್ಕೆ ಮುಂದಾದರೆ ಸರ್ಕಾರಿ ಬಸ್ ವ್ಯವಸ್ಥೆ ಮಾಡುವುದಾಗಿ ಜಿಲ್ಲಾ ಸಾರಿಗೆ ಡಿಟಿಓ ಮಂಜುನಾಥ್ ಭರವಸೆ ನೀಡಿದ್ದಾರೆ. ಸಂಚಾರದಿಂದ ಜನ ಹಿಂದೆ ಸರಿದರೆ ಸರ್ಕಾರಿ ಸಾರಿಗೆಗೆ ನಷ್ಟ ಉಂಟಾಗುತ್ತದೆ. ಜಿಲ್ಲೆಯ ವಿವಿಧ ತಾಲ್ಲೂಕು, ಹಳ್ಳಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಬದ್ದ ಎಂದು ತಿಳಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 180 ಬಸ್ ಸಂಚರಿಸಿವೆ. ಬಸ್ ಗಳಲ್ಲಿ ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಾಗಿದ್ದು, ಪ್ರಯಾಣಿಕರು ಯಾವುದೇ ಆತಂಕ ಇಲ್ಲದೆ ಬಸ್ ವ್ಯವಸ್ಥೆ ಬಳಸಿಕೊಳ್ಳಬಹುದೆಂದರು.