Wednesday, June 29, 2022

Latest Posts

ಚಿಕ್ಕಬಳ್ಳಾಪುರ| ಮನೆಯ ಪಕ್ಕದಲ್ಲೇ ಗಾಂಜಾ ಬೆಳೆದ ವ್ಯಕ್ತಿ ಅರೆಸ್ಟ್

ಚಿಕ್ಕಬಳ್ಳಾಪುರ: ತನ್ನ ಮನೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬೆಟ್ಟದಪ್ಪನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಮಹೇಶ್ ಬಂಧಿತ ಆರೋಪಿ. ಈತ ಮನೆಯ ಬಳಿ ಗಾಂಜಾ ಬೆಳೆದಿರುವ ಮಾಹಿತಿ ಪಡೆದ ಗೌರಿಬಿದನೂರು ಇನ್ಸ್‌ಪೆಕ್ಟರ್ ರವಿ ಹಾಗೂ ಗ್ರಾಮಾಂತರ ಠಾಣಾ ಪಿಎಸ್ಐ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಂದ 7 ಕೆಜಿ ಅಕ್ರಮ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss