ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಮನೆಯಲ್ಲಿ ಅಡುಗೆ ಮಾಡುವ ವ್ಯಕ್ತಿಗೆ ಕೊರೋನಾ ಸೋಂಕು ದೃಡ ಪಟ್ಟಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಸುಧಾಕರ್ ಅವರ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ದೃಡಪಟ್ಟಿರುವ ಹಿನ್ನೆಲೆ, ಸಚಿವ ಸುಧಾಕರ್ ಸೇರಿ ಕುಟುಂಬಸ್ಥರು ಕೊರೋನ ಪರೀಕ್ಷೆಗೆ ಒಳಪಟ್ಟಿದ್ದಾರೆ ಎನ್ನಲಾಗಿದೆ.ಸಚಿವ ಸುಧಾಕರ್ ಅವರ ಮನೆಯನ್ನು ಸೀಲ್ ಡೌನ್ ಮಾಡಲಾಗಿವುದೇ? ಅವರ ಕುಟುಂಬ ಸದಸ್ಯರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುವುದೇ ಎಂಬ ಬಗ್ಗೆ ಸರ್ಕಾರ ಯಾವ ನಿರ್ದಾರ ತೆಗೆದುಕೊಳ್ಳಲಿದೆ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ.