ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಮಹಿಳೆ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗು 10 ಮಂದಿ ಸೊಂಕಿತರು ಗುಣಮುಖರಾದಂತಾಗಿದೆ.
ಚಿಕ್ಕಬಳ್ಳಾಪುರ ನಗರದ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.191 ಇಂದು ಡಿಸ್ಚಾರ್ಜ್ ಆಗಿದ್ದಾರೆ. ಅಂದಹಾಗೆ ಈಕೆ ಗೌರಿಬಿದನೂರಿನ ಪಿ.19 ರ ಸಹೋದರಿಯಾಗಿದ್ದಾರೆ. ಪಿ.19ರ ತಂದೆ-ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಚಿಕ್ಕಮ್ಮನಿಗೂ ಸೋಂಕು ತಗಲಿತ್ತು.
ಈ ಮೂಲಕ ಒಂದೇ ಕುಟುಂಬದ 6 ಮಂದಿಗೆ ಸೋಂಕು ದೃಢವಾಗಿತ್ತು. ಸದ್ಯ 6 ಮಂದಿ ಸಹ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಇಡೀ ಕುಟುಂಬ ಕೊರೊನಾ ಮುಕ್ತವಾಗಿದೆ.
ಸದ್ಯ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರಲ್ಲಿ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗುಣಮುಖರಾಗಿದ್ದು, 4 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.