ಚಿಕ್ಕಮಗಳೂರು: ನಗರದ ಕೋವಿಡ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ನಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯ ಶೌಚಾಲಯದಲ್ಲಿ ನೇಣುಬಿಗಿದಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
47 ವರ್ಷದ ಈ ವ್ಯಕ್ತಿ ಎನ್ಆರ್ಪುರ ಮೂಲದವನಾಗಿದ್ದು, ಮಹರಾಷ್ಟ್ರದಿಂದ ಬಂದಿದ್ದ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದ ಎನ್ನುವ ಕಾರಣಕ್ಕೆ ಆತನನ್ನು ನಾಲ್ಕು ದಿನಗಳ ಹಿಂದೆ ಕ್ವಾರಂಟೈನ್ನಲ್ಲಿಟ್ಟು ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಸಿಕೊಡಲಾಗಿತ್ತು.
ಕ್ವಾರಂಟೈನ್ಗೆ ಒಳಗಾಗಿದ್ದಾಗಿನಿಂದಲೂ ಖಿನ್ನತೆಗೆ ಒಳಗಾಗಿದ್ದ ಆತ ಪರೀಕ್ಷಾ ವರದಿ ಬರುವ ಮುನ್ನವೇ ಕೊರೋನಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾನುವಾರ ಬೆಳಗ್ಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.