Monday, July 4, 2022

Latest Posts

ಚಿಕ್ಕಮಗಳೂರು ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿಯ ವರ್ಗಾವಣೆ

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಜಿಲ್ಲಾಧಿಕಾರಿ ಡಾ. ಎಸ್.ಬಗಾದಿ ಗೌತಮ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಇಬ್ಬರನ್ನೂ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರನ್ನು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರನ್ನಾಗಿ
(ಜಾರಿ ನಿರ್ದೇಶನಾಲಯ) ನೇಮಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿದ್ದ ಕೆ.ಎನ್.ರಮೇಶ್ ಅವರನ್ನು ನೇಮಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಅವರನ್ನು ದಕ್ಷಿಣಕನ್ನಡದ ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಿ ವರ್ಗಾಯಿಸಲಾಗಿದೆ. ಡಾ.ಕುಮಾರ್ ಅವರು ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಯಾಗಿ ಬಡ್ತಿ ಹೊಂದಿದ್ದರು.
ಇಬ್ಬರೂ ಅಧಿಕಾರಿಗಳು ಜಿಲ್ಲೆಯಲ್ಲಿ ಸಮನ್ವಯತೆಯಿಂದ ಕೆಲಸ ಮಾಡಿದ್ದರು. ಪ್ರಮುಖವಾಗಿ 2020 ರಲ್ಲಿ ಸಂಭವಿಸಿದ ಅತೀವೃಷ್ಟಿ
ಮತ್ತು 2021 ರಲ್ಲಿ ಕೊರೋನಾ ಸೋಂಕಿನಿಂದ ತಲೆದೋರಿದ್ದ ಸಮಸ್ಯೆಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss