ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 63 ಜನರಿಗೆ ಕೊರೋನಾ ಪಾಸಿಟೀವ್ ದೃಢಪಟ್ಟಿದ್ದು, 23 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 17 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 23 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 14, ಶೃಂಗೇರಿ ತಾಲ್ಲೂಕಿನಲ್ಲಿ 2, ಮೂಡಿಗೆರೆ ತಾಲ್ಲೂಕಿನಲ್ಲಿ 6, ಅಜ್ಜಂಪುರ ತಾಲ್ಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಒಟ್ಟು 645 ಪ್ರಕರಣಗಳು ಸಕ್ರಿಯವಾಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಇಬ್ಬರು ಸೋಂಕಿತರು ಸಾವಪ್ಪಿದ್ದು, ಮೃತರ ಸಂಖ್ಯೆ 24 ಕ್ಕೇರಿದೆ.