ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬುಧವಾರ ಒಟ್ಟು 112 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಒಂದೇ ದಿನದಲ್ಲಿ 238 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿರುವುದು ಸ್ವಲ್ಪ ಸಮಾಧಾನ ತಂದಿದೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 49 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 44, ಮತ್ತು ತರೀಕೆರೆ ತಾಲ್ಲೂಕಿನಲ್ಲಿ 16, ಮೂಡಿಗೆರೆ ತಾಲ್ಲೂಕಿನಲ್ಲಿ 2, ಕೊಪ್ಪ ತಾಲ್ಲೂಕಿನಲ್ಲಿ 1 ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 1818 ಕ್ಕೇರಿದ್ದು, 810 ಪ್ರಕರಣಗಳು ಸಕ್ರಿಯವಾಗಿದೆ. 971 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಮೂರು ಮಂದಿ ಮೃತಪಟ್ಟಿದ್ದು, ಇದುವರೆಗೆ 37 ಜನರು ಸಾವಿಗೀಡಾಗಿದ್ದಾರೆ.