Sunday, July 3, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ 94 ಜನರಿಗೆ ಕೊರೋನಾ ದೃಢ, 50 ಮಂದಿ ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬುಧವಾರ ಒಟ್ಟು 94 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 50 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 29 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 39, ಮತ್ತು ತರೀಕೆರೆ ತಾಲ್ಲೂಕಿನಲ್ಲಿ 12 ಮೂಡಿಗೆರೆ ತಾಲ್ಲೂಕಿನಲ್ಲಿ 5, ಕೊಪ್ಪ ತಾಲ್ಲೂಕಿನಲ್ಲಿ 2, ನರಸಿಂಹರಾಜಪುರ ತಾಲ್ಲೂಕಿನಲ್ಲಿ 4 ಹಾಗೂ ಶೃಂಗೇರಿ ತಾಲ್ಲೂಕಿನಲ್ಲಿ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 2511 ಕ್ಕೇರಿದ್ದು, 860 ಪ್ರಕರಣಗಳು ಸಕ್ರಿಯವಾಗಿದೆ. ಈವರೆಗೆ ಒಟ್ಟು 2001 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಒಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದುವರೆಗೆ ಸಾವಿಗೀಡಾದವರ ಸಂಖ್ಯೆ 50 ಕ್ಕೇರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss