Tuesday, July 5, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 111 ಜನರಿಗೆ ಕೊರೋನಾ ಸೋಂಕು ದೃಢ, 62 ಜನರು ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗುರುವಾರ ಒಟ್ಟು 111 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 62 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 43, ಜನರಿಗೆ, ಕಡೂರು ತಾಲ್ಲೂಕಿನಲ್ಲಿ 31, ಮತ್ತು ತರೀಕೆರೆ ತಾಲ್ಲೂಕಿನಲ್ಲಿ 14, ಮೂಡಿಗೆರೆ ತಾಲ್ಲೂಕಿನಲ್ಲಿ 8, ಕೊಪ್ಪ ತಾಲ್ಲೂಕಿನಲ್ಲಿ 2, ನರಸಿಂಹ ರಾಜಪುರ ತಾಲ್ಲೂಕಿನಲ್ಲಿ 2, ಅಜ್ಜಂಪುರ ತಾಲ್ಲೂಕಿನಲ್ಲಿ 10, ಶೃಂಗೇರಿಯಲ್ಲಿ ಓರ್ವರಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 2622 ಕ್ಕೇರಿದ್ದು, ಈ ವರೆಗೆ 1663 ಜನರು ಗುಣಮುಖರಾಗಿದ್ದಾರೆ. 906 ಪ್ರಕರಣಗಳು ಸಕ್ರಿಯವಾಗಿದೆ. ಗುರುವಾರ 3 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇದುವರೆಗೆ 53 ಜನರು ಸಾವಿಗೀಡಾದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss