ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 88 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 108 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 37, ಕಡೂರು ತಾಲ್ಲೂಕಿನಲ್ಲಿ 31, ತರೀಕೆರೆ ತಾಲ್ಲೂಕಿನಲ್ಲಿ 15, ಮೂಡಿಗೆರೆ ತಾಲ್ಲೂಕಿನಲ್ಲಿ 4, ಶೃಂಗೇರಿ ತಾಲ್ಲೂಕಿನಲ್ಲಿ ಓರ್ವರಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 3151 ಕ್ಕೇರಿದ್ದು, 1040 ಪ್ರಕರಣಗಳು ಸಕ್ರಿಯವಾಗಿದೆ.
ಮಂಗಳವಾರ ಮತ್ತೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ 60 ಜನರು ಸಾವಿಗೀಡಾದಂತಾಗಿದೆ.