Wednesday, June 29, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 13 ಪಾಸಿಟಿವ್, 8 ಗುಣಮುಖ, ಓರ್ವ ಬಲಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬುಧವಾರ ಕೊರೋನಾ ಸೋಂಕಿನಿಂದ ಮತ್ತೋರ್ವ ವೃದ್ಧೆ ಸಾವಿಗೀಡಾಗಿದ್ದು, 13 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅರೇಹಳ್ಳಿ ಗ್ರಾಮದ 74 ವರ್ಷದ ಮಹಿಳೆ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ದಾಖಲಾದ ಅರ್ಧಗಂಟೆಯಲ್ಲೇ ಆಕೆ ಮೃತಪಟ್ಟಿದ್ದಾರೆ. ನಂತರ ನಡೆಸಿದ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ವೃದ್ಧೆ ಸಾವಿನ ಮೂಲಕ ಜಿಲ್ಲೆಯಲ್ಲಿ ಕೊರೋನಾದಿಂದ ಸಾವಿಗೀಡಾದವರ ಸಂಖ್ಯೆ 7 ಕ್ಕೇರಿದೆ.
ಜಿಲ್ಲೆಯಲ್ಲಿ ಬುಧವಾರ 13 ಕರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಚಿಕ್ಕಮಗಳೂರು 11, ಶೃಂಗೇರಿ 1, ಮೂಡಿಗೆರೆಯಲ್ಲಿ 1 ಪ್ರಕರಣ ದೃಢಪಟ್ಟಿದೆ. ಚಿಕ್ಕಮಗಳೂರು ನಗರದ ಉಪ್ಪಳ್ಳಿ ನಿವಾಸಿ ಬರೋಡ ಬ್ಯಾಂಕ್‍ನ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನ ಬ್ಯಾಂಕ್ ಬಂದ್ ಮಾಡಿ ಸ್ಯಾನಿಟೈಸಿಂಗ್ ಮಾಡಲಾಗಿದೆ.
ಎಂಟು ಮಂದಿ ಸೊಂಕಿತರು ಗುಣ ಹೊಂದಿದ್ದ ಹಿನ್ನೆಲೆಯಲ್ಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 168 ಸೋಂಕಿತರು ಪತ್ತೆಯಾಗಿದ್ದು 101 ಮಂದಿ ಗುಣಹೊಂದಿ ಬಿಡುಗಡೆಯಾಗಿದ್ದಾರೆ. 60 ಸಕ್ರೀಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss