Monday, August 8, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶನಿವಾರ 109 ಜನರಿಗೆ ಕೊರೋನಾ ದೃಢ, 122 ಜನರು ಗುಣಮುಖ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ಒಟ್ಟು 109 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 122 ಜನರು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 68 ಜನರಿಗೆ, ಕಡೂರು ತಾಲ್ಲೂಕಿನಲ್ಲಿ 6 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 31, ಕೊಪ್ಪ ತಾಲ್ಲೂಕಿನಲ್ಲಿ 4 ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7989 ಕ್ಕೇರಿದ್ದು, 1282 ಪ್ರಕರಣಗಳು ಸಕ್ರಿಯವಾಗಿದೆ. 6591ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 116 ಜನರು ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss