Thursday, June 30, 2022

Latest Posts

ಚಿತ್ರದುರ್ಗ| ಎಲ್ಲರೂ ಒಗ್ಗಟ್ಟಿನಿಂದ ಕೊರೋನಾ ವಿರುದ್ಧ ಹೋರಾಡಬೇಕಿದೆ: ಡಾ.ಸಿ.ಎಲ್.ಪಾಲಾಕ್ಷ

ಚಿತ್ರದುರ್ಗ: ಜಿಲ್ಲೆಯಲ್ಲಿ ವಲಸಿಗರಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮನೆಯಿಂದ ಹೊರಗೆ ಬಂದಾಗ ಮಾಸ್ಕ್ ಧರಿಸಿ ಹಾಗೂ ಕೈಗಳಿಗೆ ಸ್ಯಾನಿಟೈಜರ್ ಬಳಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ ಸಲಹೆ ಮಾಡಿದರು.
ನಗರದ ಬ್ಯಾಂಕ್ ಕಾಲೋನಿಯ ಮದಕರಿ ಬೀದಿ ನಿವಾಸಿಗಳು ಭಾನುವಾರ ಹಮ್ಮಿಕೊಂಡಿದ್ದ ಕೊರೋನಾ ವಾರಿಯರ‍್ಸ್‌ಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ಬೇರೆ ಎಲ್ಲಾ ಇಲಾಖೆಗಳ ಸಹಕಾರದಿಂದ ಕೊರೋನಾ ತಡೆಯಲು ಸಾಧ್ಯವಾಗಿದೆ. ಅದರಲ್ಲೂ ಸಾರ್ವಜನಿಕರ ಸಹಕಾರ ತುಂಬಾ ಮುಖ್ಯ. ಯಾರಿಗೇ ಕೊರೋನಾ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ. ಎಲ್ಲರೂ ಒಗ್ಗಟ್ಟಿನಿಂದ ಕೊರೋನಾ ವಿರುದ್ಧ ಹೋರಾಡಬೇಕಿದೆ ಎಂದರು.
ಪೊಲೀಸ್ ವೃತ್ತ ನಿರೀಕ್ಷಕ ಆರ್.ರಮೇಶ್ ಮಾತನಾಡಿ, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಸರಕಾರದಿಂದ ಬರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆಶಾಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ನಿಮ್ಮ ಬಡಾವಣೆಯಲ್ಲಿ ಆರೋಗ್ಯ ತಪಾಸಣೆಗೆ ಬಂದಾಗ ಸಹಕಾರಿ ನೀಡಿ. ಎಲ್ಲರೂ ನಿಮ್ಮ ಆರೋಗ್ಯ ಕಾಪಾಡಲು ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಸಾಕಷ್ಟು ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ಸಿ.ಎಲ್.ಪಾಲಾಕ್ಷ, ಪೊಲೀಸ್ ನಿರೀಕ್ಷಕ ಆರ್.ರಮೇಶ್, ಸಹಾಯಕ ಪೊಲೀಸ್ ನಿರೀಕ್ಷಕ ಸಂಜಯ್, ಪೊಲೀಸ್ ಪೇದೆ ಸುಮ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳ ಕಚೇರಿಯ ಮುಖ್ಯ ಪೇದೆ ವೀರಣ್ಣ ರೆಡ್ಡಿ, ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ಪೇದೆ ವೆಂಕಟೇಶ್,
ಜಿಲ್ಲಾ ಆಸ್ಪತ್ರೆಯ ಶುಶ್ರೂಷಕಿಯರಾದ ಶರಣಮ್ಮ, ಸರಸ್ವತಿ, ಲತಾ, ಗಂಗಮ್ಮ, ಗೀತಮ್ಮ, ರೇಖಾ, ಆರೋಗ್ಯ ನಿರೀಕ್ಷಕ ನಾಗರಾಜ, ನಗರಸಭೆ ಆರೋಗ್ಯ ನಿರೀಕ್ಷಕ ಬಾಬುರೆಡ್ಡಿ, ಜಿಲ್ಲಾ ಆಸ್ಪತ್ರೆಯ ವಾಹನ ಚಾಲಕ ರಮೇಶ್ ನಾಯ್ಕ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಬ್ಯಾಂಕ್ ಕಾಲೋನಿಯ ಮದಕರಿ ಬೀದಿ ನಿವಾಸಿಗಳಾದ ಶಿಕ್ಷಕ ಕೆ.ಜೆ.ನಾಗರಾಜ್, ಟಿ.ಎಲ್.ವೀರಬ್ರಹ್ಮಚಾರಿ, ಟೈಲರ್ ಮೈಲಾರಿ, ಶಿಕ್ಷಕರಾದ ಪಾಲಣ್ಣ, ಶ್ರೀಧರ ರೆಡ್ಡಿ, ಲಿಂಗೇಶ್ವರ ಸೇರಿದಂತೆ ನೂರಾರು ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss