Wednesday, June 29, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 125 ಜನರಿಗೆ ಕೋವಿಡ್ ಸೋಂಕು ದೃಢ, 250 ಜನರು ಗುಣಮುಖ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ೧೨೫ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೫,೩೫೬ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೬೨, ಚಳ್ಳಕೆರೆ ೧೩, ಹಿರಿಯೂರು ೦೫, ಹೊಸದುರ್ಗ ೧೩, ಮೊಳಕಾಲ್ಮುರು ೧೩ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ೧೯ ಸೇರಿದಂತೆ ಒಟ್ಟು ೧೨೫ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ ೨೫೦ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು ೧,೨೬೨ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೧೨೫ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೫,೩೫೬ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೩೩ ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೪,೦೬೧ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೧,೨೬೦ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೧,೧೯೬ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೩೫,೪೧೩ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೫೦,೬೪೪ ಜನರ ಮಾದರಿ ಸಂಗ್ರಹಿಸಲಾಗಿದ್ದು, ೪೪,೦೫೮ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೭೭೭ ಜನರ ವರದಿ ಬರುವುದು ಬಾಕಿ ಇದೆ. ೪೫೩ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss