Monday, August 8, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 125 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ೧೨೫ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೨೩೩೧ ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೨೪, ಹಿರಿಯೂರು-೪೭, ಚಳ್ಳಕೆರೆ-೨೭, ಮೊಳಕಾಲ್ಮುರು ೨೦, ಹೊಸದುರ್ಗ ೫ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ೨ ಸೇರಿದಂತೆ ಒಟ್ಟು ೧೨೫ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುರುವಾರ ಒಟ್ಟು ೭೬೫ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೧೨೫ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೨೩೩೧ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೩೪ ಜನ ಕೋವಿಡ್‌ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧೫೬೨ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೭೩೪ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೫೬೨ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೧೬೬೯೬ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ೩೫೭೭೪ ಜನರ ಮಾದರಿ ಸಂಗ್ರಹಿಸಲಾಗಿದ್ದು, ೩೨೩೪೪ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೬೮೧ ಜನರ ವರದಿ ಬರುವುದು ಬಾಕಿ ಇದೆ. ೪೧೮ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss