Sunday, June 26, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 23 ಜನರಿಗೆ ಕೋವಿಡ್ ದೃಢ, ಸೋಂಕಿತರ ಸಂಖ್ಯೆ 4,065ಕ್ಕೆ ಏರಿಕೆ

ಚಿತ್ರದುರ್ಗ:    ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 23 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,065ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 15, ಚಳ್ಳಕೆರೆ 05, ಹಿರಿಯೂರು 01, ಹೊಸದುರ್ಗ 01 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 01 ಸೇರಿದಂತೆ ಒಟ್ಟು 23 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಳವಾರ 192 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 796 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 23 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 4065ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 2,513 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,517  ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 832 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 31,306  ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 44,802 ಜನರ ಮಾದರಿ ಸಂಗ್ರಹಿಸಲಾಗಿದ್ದು, 39,079 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1216 ಜನರ ವರದಿ ಬರುವುದು ಬಾಕಿ ಇದೆ. 442 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss