Wednesday, August 17, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 241 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ:  ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 241 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5597 ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಒಟ್ಟು 2805 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 241 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5597 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4061 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1501 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 1396 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 37907 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 53448 ಜನರ ಮಾದರಿ ಸಂಗ್ರಹಿಸಲಾಗಿದ್ದು, 45828 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1571 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!