ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ೨೫೩ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೭,೯೪೬ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ ೩೩೮ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು ೧,೨೩೦ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೨೫೩ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೭,೯೪೬ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೩೭ ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೭,೮೦೫ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೬೩೪ ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೬೫,೨೧೯ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೭೦,೯೭೭ ಜನರ ಮಾದರಿ ಸಂಗ್ರಹಿಸಲಾಗಿದ್ದು, ೬೨,೪೨೧ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೧೪೧ ಜನರ ವರದಿ ಬರುವುದು ಬಾಕಿ ಇದೆ. ೪೬೯ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.