Thursday, August 18, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಸೋಂಕು ದೃಢ, 421 ಜನರು ಗುಣಮುಖ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 254 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6070 ಕ್ಕೆ ಏರಿಕೆಯಾದಂತಾಗಿದೆ
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 421 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 816 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 254 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6070 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4830 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1157 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 1396 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 39070 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 55144 ಜನರ ಮಾದರಿ ಸಂಗ್ರಹಿಸಲಾಗಿದ್ದು, 47387 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1234 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!