Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್‌ಗೆ ಮೊದಲ ಬಲಿ: 75 ವರ್ಷದ ವೃದ್ಧೆ ಸಾವು

sharing is caring...!

ಚಿತ್ರದುರ್ಗ: ಕೋವಿಡ್-೧೯ ದೃಢಪಟ್ಟು ಚಿಕಿತ್ಸೆಗಾಗಿ ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾದ ದಿನವೇ ಹಿರಿಯೂರಿನ ಚಿಗುಟು ಮಲ್ಲೇಶ್ವರ ಬಡಾವಣೆಯ ೭೫ ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ೧೦೩ ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಯಾರೂ ಮೃತಪಟ್ಟಿರಲಿಲ್ಲ. ಇದು ಮೃತಪಟ್ಟ ಮೊದಲ ಪ್ರಕರಣವಾಗಿದೆ.
ಮೃತ ವೃದ್ದೆಯ ಅಂತ್ಯಕ್ರಿಯೆಯನ್ನು ಹಿರಿಯೂರು ನಗರದ ಹರಿಶ್ಚಂದ್ರ ಘಾಟ್‌ನ ರುದ್ರಭೂಮಿಯಲ್ಲಿ ಶನಿವಾರ ರಾತ್ರಿ ಕೋವಿಡ್ ಮಾರ್ಗಸೂಚಿ ಪ್ರಕಾರ ನೆರವೇರಿಸಲಾಗಿದೆ. ಅತಿಯಾದ ಮಧುಮೇಹ ಕಾಯಿಲೆ ಹೊಂದಿದ್ದ ವೃದ್ಧೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೃದ್ಧೆಯ ೫೪ ವರ್ಷದ ಮಗನಿಗೆ ಜುಲೈ ೭ ರಂದು ಸೋಂಕು ದೃಢಪಟ್ಟಿತ್ತು. ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊದಲು ಮಗನಲ್ಲಿ ಕಾಣಿಸಿಕೊಂಡಿದ್ದ ಸೋಂಕು ನಾಲ್ಕೇ ದಿನದಲ್ಲಿ ಆತನ ವಯೋವೃದ್ಧ ತಾಯಿ ಹಾಗೂ ೨೧ ವರ್ಷದ ಮೊಮ್ಮಗನಿಗೂ ತಗುಲಿದೆ. ಮೊಮ್ಮಗನನ್ನು ಹಿರಿಯೂರು ತಾಲ್ಲೂಕಿನ ಧರ್ಮಪುರ ಕೋವಿಡ್ ಕೇರ್‌ಗೆ ದಾಖಲಿಸಲಾಗಿದೆ.ಅನಾರೋಗ್ಯ ಕಾರಣ ವೃದ್ಧೆಯನ್ನು ಶನಿವಾರ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು.
ನಗರಸಭೆ ಅಧಿಕಾರಿಗಳು ಹಾಗೂ ಮೃತರ ಸಮುದಾಯದ ಮುಖಂಡರು ಶನಿವಾರ ರಾತ್ರಿ ಅಂತ್ಯಕ್ರಿಯೆ ನಡೆಸುವ ಕುರಿತು ಸಮಾಲೋಚನೆ ನಡೆಸಿದರು. ಕುಟುಂಬದ ಹತ್ತಿರದ ಸಂಬಂಧಿಕರೊಂದಿಗೆ ಚರ್ಚಿಸಿ, ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು. ನಗರಸಭೆಯ ಜೆಸಿಬಿ ಯಂತ್ರದ ಸಹಾಯದಿಂದ ಗುಂಡಿ ತೋಡಿಸಲಾಯಿತು. ಜೆಸಿಬಿ ಚಾಲಕನಿಗೂ ಪಿಪಿಇ ಕಿಟ್ ಹಾಕಿಸಲಾಗಿತ್ತು. ಸೋಂಕಿತ ವ್ಯಕ್ತಿಯ ಮೂಗು, ಬಾಯಿನಿಂದ ದ್ರವ ಹೊರಗೆ ಬರದಂತೆ ಮೃತ ದೇಹವನ್ನು ಎರಡು ಲೇಯರ್‌ಗಳಲ್ಲಿ ಪ್ಯಾಕ್ ಮಾಡಲಾಗಿತ್ತು.
ಪಿಪಿಇ ಕಿಟ್ ಹಾಕಿಕೊಂಡು ಜಿಲ್ಲಾ ಆಸ್ಪತ್ರೆಯ ಶವಾಗಾರ, ಕೋವಿಡ್ ಆಸ್ಪತ್ರೆಯ ‘ಡಿ’ ಗ್ರೂಪ್‌ನ ತಲಾ ಇಬ್ಬರು ಸಿಬ್ಬಂದಿ ಹಾಗೂ ಚಾಲಕ ಶವವನ್ನು ವಾಹನದಲ್ಲಿ ಹಿರಿಯೂರಿಗೆ ತೆಗೆದುಕೊಂಡು ಬಂದಿದ್ದರು. ೮ ಅಡಿ ಆಳದ ಗುಂಡಿಯಲ್ಲಿ ಮೃತ ದೇಹವನ್ನು ಇಟ್ಟು ಸೋಂಕು ನಿವಾರಣೆಗಾಗಿ ಅದರ ಮೇಲೆ ಸೋಡಿಯಂ ಹೈಪೊಕ್ಲೋರೈಡ್ ರಾಸಾಯನಿಕ ಸಿಂಪಡಿಸಲಾಯಿತು. ನಂತರ ಮಣ್ಣು ಮುಚ್ಚಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ತಿಳಿದುಬಂದಿದೆ.
ವೃದ್ಧೆಯ ಅಂತ್ಯಕ್ರಿಯೆ ಮುಗಿದ ಬಳಿಕ ಕೆಲವು ನಾಗರಿಕರಿಗೆ ವಿಷಯ ತಿಳಿದಿದೆ. ರುದ್ರಭೂಮಿ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಸಿಬಿ, ನಗರಸಭೆ ಪೌರಾಯುಕ್ತರ, ಆರೋಗ್ಯ ಇಲಾಖೆಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಪ್ರತಿಭಟನಕಾರರ ಮನವೊಲಿಸಿ ವಾಪಸ್ ಕಳುಹಿಸಿದರು ಎನ್ನಲಾಗಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!