Tuesday, August 9, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 30 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ:  ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ಮತ್ತೆ ೩೦ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೪೫೭ ಕ್ಕೆ ಏರಿಕೆಯಾದಂತಾಗಿದೆ.
ಸೋಮವಾರ ಒಟ್ಟು ೬೩೫ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೩೦ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ ೪೫೭ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೧೦ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧೫೧ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೨೯೬ ಸಕ್ರಿಯ ಪ್ರಕರಣಗಳು ಇವೆ.
೨೯೬ ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ ೬೩, ಭರಮಸಾಗರ-೧೪, ಹಿರಿಯೂರು ತಾಲ್ಲೂಕು ಧರ್ಮಪುರ-೩೧, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- ೧೧, ಹೊಸದುರ್ಗ ತಾಲ್ಲೂಕು ಬೆಲಗೂರು- ೧೬, ಕೆ.ಕೆ. ಪುರ ೧೭, ಮೊಳಕಾಲ್ಮೂರು ತಾಲ್ಲೂಕು ರಾಂಪುರ ೦೫, ಹಿರಿಯೂರು ತಾಲ್ಲೂಕು ಮರಡಿಹಳ್ಳಿ ೦೬, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- ೧೦, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ-೧೧, ಹೊಳಲ್ಕೆರೆ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‌ನಲ್ಲಿ ೦೩, ಚಿತ್ರದುರ್ಗ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ೦೩. ಜಿಲ್ಲೆಯಲ್ಲಿ ಪಾಸಿಟಿವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ೧೬. ಹೋಂ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ೬೪. ಉಳಿದ ೨೬ ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೧೩೨ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೩೯೭೮ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್‌ಐ, ಯುಆರೈನ ಒಟ್ಟು ೪೦೮೬ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ ೧೦೧೩ ಜನ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಈವರೆಗೆ ೧೪೬೭೮ ಜನರ ಮಾದರಿ ಸಂಗ್ರಹಿಸಲಾಗಿದ್ದು, ೧೩೩೮೨ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೨೪೨ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss