Saturday, August 13, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 33 ಜನರಿಗೆ ಕೋವಿಡ್ ಸೋಂಕು ದೃಢ 

ಚಿತ್ರದುರ್ಗ:  ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ಮತ್ತೆ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 800 ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 05, ಹಿರಿಯೂರು-05, ಚಳ್ಳಕೆರೆ-09, ಹೊಳಲ್ಕೆರೆ-02 ಹಾಗೂ  ಮೊಳಕಾಲ್ಮೂರು ತಾಲ್ಲೂಕಿನಲ್ಲಿ 12 ಸೇರಿದಂತೆ ಒಟ್ಟು 33 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಸೋಮವಾರ ಒಟ್ಟು 958 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 33 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು,  ಇದರಿಂದಾಗಿ ಸೋಂಕಿತರ ಸಂಖ್ಯೆ 800 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 16 ಜನ ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 315 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 469 ಸಕ್ರಿಯ ಪ್ರಕರಣಗಳು ಇವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss