ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ೪೨ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೧೧೬೨ ಕ್ಕೆ ಏರಿಕೆಯಾದಂತಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ ೨೦ ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೧೧, ಹೊಳಲ್ಕೆರೆ-೭, ಹಿರಿಯೂರು-೮, ಚಳ್ಳಕೆರೆ-೭, ಹೊಸದುರ್ಗ-೭ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ೨ ಸೇರಿದಂತೆ ಒಟ್ಟು ೪೨ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಇಂದು ೫೨ ವರ್ಷದ ಪುರುಷ ಮೃತಪಟ್ಟಿದ್ದಾರೆ.
ಸೋಮವಾರ ಒಟ್ಟು ೫೨೭ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೪೨ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೧೧೬೨ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೧೮ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೫೫೩ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೫೯೦ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೩೦೨ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೭೫೦೪ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ೨೪೧೧೬ ಜನರ ಮಾದರಿ ಸಂಗ್ರಹಿಸಲಾಗಿದ್ದು, ೨೦೨೪೨ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೨೪೧೬ ಜನರ ವರದಿ ಬರುವುದು ಬಾಕಿ ಇದೆ. ೨೯೬ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.