Wednesday, June 29, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 54 ಜನರಿಗೆ ಕೋವಿಡ್ ಸೋಂಕು ದೃಢ 

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ೫೪ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೧೬೫೦ ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೧೮, ಹಿರಿಯೂರು-೭, ಚಳ್ಳಕೆರೆ-೧೩, ಹೊಸದುರ್ಗ-೯ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ೭ ಸೇರಿದಂತೆ ಒಟ್ಟು ೫೪ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬುಧವಾರ ಒಟ್ಟು ೬೮೩ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೫೪ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೧೬೫೦ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೧೯ ಜನ ಕೋವಿಡ್‌ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧೧೪೬ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೪೮೪ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೫೦೭ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೧೨೦೭೩ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ೩೧೫೬೩ ಜನರ ಮಾದರಿ ಸಂಗ್ರಹಿಸಲಾಗಿದ್ದು, ೨೩೪೫೩ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೬೧೨೦ ಜನರ ವರದಿ ಬರುವುದು ಬಾಕಿ ಇದೆ. ೩೪೦ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss