Wednesday, August 10, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 60 ಜನರಿಗೆ ಕೋವಿಡ್ ದೃಢ, ಸೋಂಕಿತರ ಸಂಖ್ಯೆ 721 ಕ್ಕೆ ಏರಿಕೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ ಮತ್ತೆ 60 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 721 ಕ್ಕೆ ಏರಿಕೆಯಾದಂತಾಗಿದೆ. ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಹೊಳಲ್ಕೆರೆ-04, ಹಿರಿಯೂರು-18, ಚಳ್ಳಕೆರೆ-12, ಹೊಸದುರ್ಗ-08 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 02 ಸೇರಿದಂತೆ ಒಟ್ಟು 60 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಶನಿವಾರ ಒಟ್ಟು 721 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 60 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 721 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 15 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 278 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 428 ಸಕ್ರಿಯ ಪ್ರಕರಣಗಳು ಇವೆ.
428 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 83, ಭರಮಸಾಗರ-17, ಹಿರಿಯೂರು ತಾಲ್ಲೂಕು ಧರ್ಮಪುರ-34, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 12, ಹೊಸದುರ್ಗ ತಾಲ್ಲೂಕು ಬೆಲಗೂರು- 17, ಕೆ.ಕೆ. ಪುರ 15, ಮೊಳಕಾಲ್ಮೂರು ತಾಲ್ಲೂಕು ರಾಂಪುರ 14, ಹಿರಿಯೂರು ತಾಲ್ಲೂಕು ಮರಡಿಹಳ್ಳಿ 24, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 11, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ-21, ಹೊಳಲ್ಕೆರೆ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‍ನಲ್ಲಿ 03, ಚಿತ್ರದುರ್ಗ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ 12. ಮೊಳಕಾಲ್ಮೂರಿನ ಆದರ್ಶ ಶಾಲೆಯಲ್ಲಿ 01, ಚಳ್ಳಕೆರೆ ಬಿಸಿಎಂ ಹಾಸ್ಟೆಲ್ ಸಿ.ಸಿ ಸೆಂಟರ್ 08, ಹೊಸದುರ್ಗ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ 02, ಚಿತ್ರದುರ್ಗ ಬಿಎಂ ಸಿಹೆಚ್ 01. ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 23. ಹೋಂ ಕ್ವಾರಂಟೈನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 124. ಉಳಿದ 06 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 180 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4638 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರೈನ ಒಟ್ಟು 4820 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 1358 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 17382 ಜನರ ಮಾದರಿ ಸಂಗ್ರಹಿಸಲಾಗಿದ್ದು, 16109 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 251 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss