Friday, July 1, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 65 ಜನರಿಗೆ ಕೋವಿಡ್ ದೃಢ : ಸೋಂಕಿತರ ಸಂಖ್ಯೆ 12,407 ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 65 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,407 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 143 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 1317 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 65 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,407ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಮೃತರಾಗಿದ್ದು ಒಟ್ಟು 60 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 11,843 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 503 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 94,387 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,10,782 ಜನರ ಮಾದರಿ ಸಂಗ್ರಹಿಸಲಾಗಿದ್ದು, 97,432 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 453 ಜನರ ವರದಿ ಬರುವುದು ಬಾಕಿ ಇದೆ. 490 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss