Monday, August 8, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 65 ಜನರಿಗೆ ಕೋವಿಡ್ ಸೋಂಕು ದೃಢ , 22 ಮಂದಿ ಗುಣಮುಖರಾಗಿ, ಬಿಡುಗಡೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಮತ್ತೆ ೬೫ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೯೫೭ ಕ್ಕೆ ಏರಿಕೆಯಾದಂತಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ೨೦, ಹೊಳಲ್ಕೆರೆ-೦೩, ಹಿರಿಯೂರು-೧೦, ಚಳ್ಳಕೆರೆ-೨೪, ಹೊಸದುರ್ಗ-೦೫ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ೦೩ ಸೇರಿದಂತೆ ಒಟ್ಟು ೬೫ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಶುಕ್ರವಾರ ೧೯೯ ಜನರು ರ‍್ಯಾಪಿಟ್ ಅಂಟಿಜನ್ ಕಿಟ್ ಹಾಗೂ ೨೨೭ ಜನರು ಆರ್‌ಟಿಪಿಸಿಆರ್ ಪರೀಕ್ಷೆ ಸೇರಿದಂತೆ ಒಟ್ಟು ೪೨೬ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೬೫ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೯೫೭ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೧೬ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಶುಕ್ರವಾರ ೨೨ ಜನರು ಸೇರಿದಂತೆ ಒಟ್ಟು ೫೦೨ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೪೪೦ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೩೦೨ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೬೬೯೪ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್‌ಐ, ಯುಆರೈನ ಒಟ್ಟು ೫೫೪೮ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈವರೆಗೆ ೨೧,೪೧೩ ಜನರ ಮಾದರಿ ಸಂಗ್ರಹಿಸಲಾಗಿದ್ದು, ೧೮,೬೩೦ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೧೫೩೪ ಜನರ ವರದಿ ಬರುವುದು ಬಾಕಿ ಇದೆ. ೨೯೨ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss