Monday, August 8, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 70ಜನರಿಗೆ ಕೋವಿಡ್ ಸೋಂಕು ದೃಢ, 40 ಜನರು ಗುಣಮುಖ

 ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ೭೦ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೨೨೦೬ ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೦೪, ಹಿರಿಯೂರು-೦೩, ಚಳ್ಳಕೆರೆ-೩೨, ಮೊಳಕಾಲ್ಮುರು ೧೮ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ೧೩ ಸೇರಿದಂತೆ ಒಟ್ಟು ೭೦ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ ೪೦ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು ೫೯೩ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೭೦ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೨೨೦೬ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೩೪ ಜನ ಕೋವಿಡ್‌ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧೫೬೨ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೬೦೯ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೫೫೫ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೧೬೨೯೮ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ೩೫೦೦೯ ಜನರ ಮಾದರಿ ಸಂಗ್ರಹಿಸಲಾಗಿದ್ದು, ೩೧೩೮೧ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೧೦೦೪ ಜನರ ವರದಿ ಬರುವುದು ಬಾಕಿ ಇದೆ. ೪೧೮ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss