ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಮತ್ತೆ ೮೦ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೧೪೩೦ ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ ೫೯ ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ೨೨ ಹೊಳಲ್ಕೆರೆ-೦೧, ಹಿರಿಯೂರು-೦೭, ಚಳ್ಳಕೆರೆ-೦೧, ಹೊಸದುರ್ಗ-೧೬ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ ೩೩ ಸೇರಿದಂತೆ ಒಟ್ಟು ೮೦ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಶುಕ್ರವಾರ ಒಟ್ಟು ೯೪೫ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ ೮೦ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೧೪೩೦ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೧೯ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ ೭೬೬ ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೬೪೪ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೪೫೯ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೯೧೨೩ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೨೮೨೬೨ ಜನರ ಮಾದರಿ ಸಂಗ್ರಹಿಸಲಾಗಿದ್ದು, ೨೧೯೬೮ ಜನರ ವರದಿ ನೆಗೆಟೀವ್ ಬಂದಿದೆ. ಉಳಿದ ೪೫೬೩ ಜನರ ವರದಿ ಬರುವುದು ಬಾಕಿ ಇದೆ. ೩೦೧ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.