ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ೯೨ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೨,೪೨೩ ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೩೫, ಹಿರಿಯೂರು-೧೧, ಚಳ್ಳಕೆರೆ-೧೨, ಮೊಳಕಾಲ್ಮುರು ೦೩, ಹೊಸದುರ್ಗ ೧೨ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ೧೯ ಸೇರಿದಂತೆ ಒಟ್ಟು ೯೨ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ ೯೭ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು ೭೮೮ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ ೯೨ ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ ೨,೪೨೩ ಕ್ಕೆ ಏರಿಕೆಯಾಗಿದ್ದು, ಇದುವರೆಗೆ ೩೪ ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧,೬೫೯ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೮೨೬ ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು ೫೯೭ ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೧೬,೬೯೬ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೩೬,೫೬೨ ಜನರ ಮಾದರಿ ಸಂಗ್ರಹಿಸಲಾಗಿದ್ದು, ೩೨,೬೧೪ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೧,೧೦೬ ಜನರ ವರದಿ ಬರುವುದು ಬಾಕಿ ಇದೆ. ೪೧೯ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.