ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಭೇಟಿ

0
37

ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯರು ಹಾಗೂ ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದರು.
ಆಶೀರ್ವಾದ ಪಡೆದು ಡಾ. ಶಿವಮೂರ್ತಿ ಮುರುಘಾ ಶರಣರೊಂದಿಗೆ ಮಾತನಾಡಿದ ಅವರು, ಕೋವಿಡ್-೧೯ ನಿಂದ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ೧೯೮೦ ರಿಂದ ಇಲ್ಲಿಯವರೆಗೂ ಎಂದೂ ನಾನು ಮನೆಯಲ್ಲಿ ಕೂತವನಲ್ಲ. ಆದರೆ ತಿಂಗಳಾನುಗಟ್ಟಲೆ ಕೊರೋನಾ ನಮ್ಮನ್ನು ಮನೆಯಲ್ಲಿ ಕೂರುವಂತೆ ಮಾಡಿತು ಎಂದು ಹೇಳಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ. ಪರೀಕ್ಷೆ ಬಗ್ಗೆ ಗೊಂದಲಗಳಿದ್ದರೂ ಪರೀಕ್ಷೆ ನಡೆಯಬೇಕು ಇಲ್ಲದಿದ್ದರೆ ಮಕ್ಕಳಲ್ಲಿ ಓದುವ ಪ್ರವೃತ್ತಿ ಕ್ಷೀಣಿಸುತ್ತದೆ. ಮಕ್ಕಳನ್ನು ಪಾಸ್ ಮಾಡುವ ಸಂದರ್ಭ, ಅದರಾಚೆಗೆ ಮುಂದಿನ ತರಗತಿಗಳ ಪ್ರವೇಶ ಎಲ್ಲದಕ್ಕೂ ಸಮಸ್ಯೆ ಉಂಟಾಗುತ್ತದೆ. ಆದುದರಿಂದ ಪೋಷಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷೆಗೆ ಕಳುಹಿಸಬೇಕು. ಅದರ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕು. ಕೋವಿಡ್-೧೯ ಹಾವಳಿ ಅಂತ್ಯವಾಗುವವರೆಗೆ ೧೦ನೇ ತರಗತಿವರೆಗಿನ ಶಾಲೆಗಳನ್ನು ತೆರೆಯದಿರುವುದು ಒಳ್ಳೆಯದು ಎಂದರು.
ಈ ಸಂದರ್ಭದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಜೆಡಿಎಸ್ ಮುಖಂಡ ಎಸ್.ವಿ.ಕೊಟ್ರೇಶ್, ವಕೀಲರಾದ ಪ್ರತಾಪ್ ಜೋಗಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here