ಬಂಟ್ವಾಳ: ಇಲ್ಲಿಗೆ ಸಮೀಪದ ಭಂಡಾರಿಬೆಟ್ಟುವಿನ ವತ್ಸಿ ವಸತಿ ಸಂಕೀರ್ಣದಲ್ಲಿ ಅ.20ರಂದು ಸುರೇಂದ್ರ ಭಂಡಾರಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಅಧಿಕೃತ ವಾಗಿ ಬಂಧಿಸಿದ್ದಾರೆ. ಬಂಟ್ವಾಳ ಅಜೆಕಲ ನಿವಾಸಿ ಸತೀಶ್ ಕುಲಾಲ್ (೩೯), ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ಯಾನೆ ಗಿರಿ( ೨೮), ಬಂಟ್ವಾಳ ಕಬ್ಬಿನಹಿತ್ಲು ನಿವಾಸಿ ಪ್ರದೀಪ್ ಕುಮಾರ್ ಯಾನೆ ಪಪ್ಪು(೩೬),ಬಂಟ್ವಾಳ ಮಂಡಾಡಿ ನಿವಾಸಿ ಶರೀಪ್ ಯಾನೆ ಸಯ್ಯದ್ ಶರೀಪ್ (೩೪),ವತ್ಸಿ ವಸತಿ ಸಂಕೀರ್ಣದ ಪಾಲುದಾರ ವೆಂಕಪ್ಪ ಪೂಜಾರಿ ಯಾನೆ ವೆಂಕಟೇಶ (೪೨),ಶರಣ್ ಯಾನೆ ಆಕಾಶ್ಭವನ ಶರಣ್ ( ೩೫),ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ರಾಜೇಶ್( ೩೩),ದಿವ್ಯರಾಜ್( ೩೦),
ಅನಿಲ್ ಪಂಪ್ವೆಲ್ (೩೫) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.