Tuesday, June 28, 2022

Latest Posts

ಚಿನ್ನ ಕಳ್ಳ ಸಾಗಾಟ: ಸಿಎಂ ರಾಜೀನಾಮೆಗೆ ಆಗ್ರಹಿಸಿ ಕಾಸರಗೋಡು ಜಿಲ್ಲಾ ಒಬಿಸಿ ಮೋರ್ಚಾದಿಂದ ಜು.15ರಂದು ಧರಣಿ

ಕಾಸರಗೋಡು: ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ಕಚೇರಿಯನ್ನು ಸಮಗ್ರ ತನಿಖೆಗೊಳಪಡಿಸಬೇಕು, ಎಲ್ಲ ಆರೋಪಿಗಳನ್ನು ಬಂಧಿಸಬೇಕು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಬೇಕು ಮುಂತಾದ ಬೇಡಿಕೆಗಳನ್ನು ಮುಂದಿರಿಸಿಕೊಂಡು ಭಾರತೀಯ ಜನತಾ ಒಬಿಸಿ ಮೋರ್ಚಾದ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜುಲೈ 15ರಂದು ಬೆಳಗ್ಗೆ 10 ಗಂಟೆಗೆ ಕಲೆಕ್ಟರೇಟ್ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ.
ಒಬಿಸಿ ಮೋರ್ಚಾದ ಕೇರಳ ರಾಜ್ಯ ಕೋಶಾಧಿಕಾರಿ, ನ್ಯಾಯವಾದಿ ನವೀನ್ ರಾಜ್ ಕೆ.ಜೆ. ಧರಣಿಯನ್ನು ಉದ್ಘಾಟಿಸುವರು. ಅಲ್ಲದೆ ಜುಲೈ 17ರಂದು ಎಲ್ಲ ಮಂಡಲ ಕೇಂದ್ರಗಳಲ್ಲಿ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಈ ಕುರಿತು ಸಮಾಲೋಚಿಸಲು ಕಾಸರಗೋಡಿನಲ್ಲಿ ಜರಗಿದ ಒಬಿಸಿ ಮೋರ್ಚಾದ ಜಿಲ್ಲಾ ಸಮಿತಿಯ ಸಭೆಯಲ್ಲಿ ಜಿಲ್ಲಾಧ್ಯಕ್ಷ ಪ್ರೇಮ್ ರಾಜ್ ಕಾಲಿಕಡವು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕೋಶಾಧಿಕಾರಿ, ನ್ಯಾಯವಾದಿ ನವೀನ್ ರಾಜ್ ಕೆ.ಜೆ., ಜಿಲ್ಲಾ ಕಾರ್ಯದರ್ಶಿ ವಿವೇಕಾನಂದನ್, ಕೋಶಾಧಿಕಾರಿ ಮೋಹನನ್ ಕೋಟಪ್ಪಾರ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಸ್ವಾಗತಿಸಿ, ಕಾರ್ಯದರ್ಶಿ ಮನೋಜ್ ವಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss