ಹೊಸದಿಲ್ಲಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಕಮಲ್ನಾಥ್ರನ್ನು ಕೈಬಿಟ್ಟಿದ್ದ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಚುನಾವಣಾ ಆಯೋಗದ ಆದೇಶ ಪ್ರಶ್ನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಕಮಲ್ನಾಥ್ಗೆ ಈಗ ರಿಲೀಫ್ ಸಿಕ್ಕಂತಾಗಿದೆ.
ಇದಕ್ಕೂ ಮೊದಲು ಸತತವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಕಮಲ್ನಾಥ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿತ್ತು.