Tuesday, July 5, 2022

Latest Posts

ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ಇಲ್ಲ, ಪಕ್ಷ ನೀಡುವ ಎಲ್ಲಾ ಜವಾಬ್ದಾರಿ ನಿಭಾಯಿಸಲು ಸಿದ್ಧ

ಹೊಸ ದಿಗಂತ ವರದಿ, ಶಿವಮೊಗ್ಗ:

ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ಹೊಂದಿಲ್ಲ. ಆದರೆ ಪಕ್ಷ ನೀಡುವ ಎಲ್ಲಾ ಜವಾಬ್ದಾರಿ ನಿಭಾಯಿಸಲು ಸಿದ್ಧ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‌ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆ ಆಗುವುದು ಬಾಕಿ ಇದೆ. ಇಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಅಭ್ಯರ್ಥಿಯೇ ಆಗಿದ್ದಾರೆ. ನಾನು ಸ್ಪರ್ಧೆ ಮಾಡುವ ಆಕಾಂಕ್ಷೆ ಹೊಂದಿಲ್ಲ. ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ‌ಪಕ್ಷ ನಿರ್ಧಾರ ಮಾಡುತ್ತದೆ ಎಂದರು.
ಪಕ್ಷ ನನಗೆ ಉಪಾಧ್ಯಕ್ಷ ಹುದ್ದೆ ನೀಡಿದೆ. ಅದನ್ನು ‌ನಿರ್ವಹಿಸುತ್ತಿದ್ದೇನೆ. ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ ಎಂದರು.

ಪಕ್ಷ ಸಂಘಟನೆಯ ಸಮಾಲೋಚನೆ
ಇತ್ತೀಚೆಗೆ ಮುಕ್ತಾಯವಾದ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಕೆಳ ಹಂತದಲ್ಲಿ ಪಕ್ಷ ಗಟ್ಟಿಯಾದರೆ ಮುಂಬರುವ ಚುನಾವಣೆ ಸುಲಭವಾಗಲಿದೆ. ಮುಂದಿನ ಸಂಘಟನೆಯ ಬಗ್ಗೆ ವಿಶೇಷ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss