Thursday, August 11, 2022

Latest Posts

ಚುನಾವಣೆ ದಿಗ್ವಿಜಯ: ನಳಿನ್ ಗೆ ಸಿಹಿ ತಿನ್ನಿಸಿ ದ.ಕ. ಬಿಜೆಪಿ ಸಂಭ್ರಮಾಚರಣೆ

ಹೊಸ ದಿಗಂತ ವರದಿ ಮಂಗಳೂರು:

ನಮ್ಮ ನಿರೀಕ್ಷೆಯಂತೆ ಉಪಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯ ಮತ್ತು ಅವರ ನಾಯಕತ್ವ ಬಲಗೊಳ್ಳಬೇಕು ಎಂಬ ಆಶಯ ಹಾಗೂ ಕೇಂದ್ರದಲ್ಲಿ ಅಡಳಿತದಲ್ಲಿರುವ ನರೇಂದ್ರ ಮೋದಿಯವರ ಅಭಿವೃದ್ದಿ ಮಂತ್ರದ ಅಡಳಿತ ನೋಡಿ‌ ಜನರು ಬಿಜೆಪಿ‌ಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಬಿಹಾರ ಚುನಾವಣೆ ಹಾಗೂ ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ‌ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ‌ ಮುಂಭಾಗ ಮಂಗಳವಾರ ನಡೆದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮೇಲೆ‌ ಜನರು ಇರಿಸಿದ ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಸಲಿದೆ. ಬಿಹಾರ, ಮಧ್ಯಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮೇಲೆ ಜನರ ಒಲವಿದೆ. ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದರೂ ಜನರ ಅಭಿಮತ ಮೋದಿ‌ ಮತ್ತು ಬಿಜೆಪಿ‌ ಮೇಲಿದೆ ಎಂದು ನಳಿನ್ ಹೇಳಿದರು.
ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಶಾಸಕ ವೇದವ್ಯಾಸ ಕಾಮತ್, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss