Monday, August 8, 2022

Latest Posts

ಚುನಾವಣೆ ಮುಂದೂಡಲು ಕೋವಿಡ್​ ಅನ್ನು ಕಾರಣವಾಗಿ ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣೆ ಮುಂದೂಡಲು ಕೋವಿಡ್​ ಅನ್ನು ಕಾರಣವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.
ಕೋವಿಡ್-19 ಸ್ಥಿತಿ ಬಗೆಹರಿಯುವವರೆಗೂ ಬಿಹಾರ ವಿಧಾನಸಭೆಯ ಚುನಾವಣೆಯನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಚುನಾವಣೆಯನ್ನು ಮುಂದೂಡಲು ಕೋವಿಡ್ ಕಾರಣವಾಗಬಾರದು ಎಂದು ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು, ‘ಚುನಾವಣಾ ಆಯೋಗವು ಎಲ್ಲ ಅಂಶಗಳನ್ನು ಪರಿಗಣಿಸಲಿದೆ’ ಎಂದು ಅಭಿಪ್ರಾಯಪಟ್ಟಿತು.
ಚುನಾವಣಾ ಆಯೋಗ ಎಲ್ಲವನ್ನೂ ಪರಿಗಣಿಸಿರುತ್ತದೆ. ಹೀಗಾಗಿ ಚುನಾವಣೆ ಮುಂದೂಡುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಅರ್ಜಿಯನ್ನು ವಜಾಗೊಳಿಸಿತು.ಪ್ರಜಾಪ್ರತಿನಿಧಿತ್ವ ಕಾಯ್ದೆ ಅನ್ವಯ ಕೋವಿಡ್​ ಸಂಕಷ್ಟವನ್ನು ವಿಶೇಷ ಸಂದರ್ಭವೆಂದು ಪರಿಗಣಿಸಿ ಚುನಾವಣೆಯನ್ನು ಮುಂದೂಡುವಂತೆ ಮುಖ್ಯ ಚುನಾವಣಾ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಅವಿನಾಶ್​ ಠಾಕೂರ್​ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss