ಹೊಸದಿಗಂತ ಆನ್ ಲೈನ್ ಡೆಸ್ಕ್:
ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ.
ನಟಿ ಪದ್ಮಜಾ ರಾವ್ ಅವರು ವ್ಯಕ್ತಿಯೊಬ್ಬರಿಗೆ ನೀಡಿದ್ದಂತ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಇಂದು ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯವು ವಿಚಾರಣೆ ನಡೆಸಿತು. ಇಂತಹ ಪ್ರಕರಣದಲ್ಲಿ ನಟಿ ಪದ್ಮಜಾ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಈ ಮೂಲಕ ನಟಿ ಪದ್ಮಜಾ ರಾವ್ ಗೆ ಇದೀಗ ಸಂಕಷ್ಟ ಶುರುವಾಗಿದೆ.