ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಉದ್ಯಮಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಕೊನೆಯ ಭಾಗವಾಗಿರುವ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.ಅದರಂತೆ ತಡೆಯಾಜ್ಞೆ ವಿಧಿಸಿದ್ದಾರೆ.