ಮುಲ್ಕಿ: ಖ್ಯಾತ ಯಕ್ಷಗಾನ ಪ್ರಸಂಗಕರ್ತ ಅಭಿನವ ನಾಗವರ್ಮ ಛಂದೋಬ್ರಹ್ಮ ಖ್ಯಾತಿಯ ಕವಿ ಡಾ. ಎನ್. ನಾರಾಯಣ ಶೆಟ್ಟರು ಕರ್ನಾಟಕದ ಹೆಮ್ಮೆಯ ಪುತ್ರ. ನಾಡು ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ, ಅನಂತ ಎಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತುತಜ್ಞ ಹಾಗು ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ತಮ್ಮ ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ವತಿಯಿಂದ ಅಗಲಿದ ಮಹಾನ್ ಚೇತನ ಡಾ. ನಾರಾಯಣ ಶೆಟ್ಟರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ಕನ್ನಡ ಸಾಹಿತ್ಯ ಲೋಕದಲ್ಲಿ ಮಹತ್ತರವಾದ ಸಾಧನೆ ಮಾಡಿ,ಬಹುಮುಖ ಪ್ರತಿಭೆಯುಳ್ಳ ಬಹುಶ್ರುತ ವಿದ್ವಾಂಸರಾದ ಡಾ. ಎನ್ . ನಾರಾಯಣ ಶೆಟ್ಟರು ಅಪೂರ್ವ ಸಮಾಜ ಸೇವಕರಾಗಿ, ಶಿಕ್ಷಕರಾಗಿ ಯಕ್ಷಗಾನ ಛಂದಸ್ಸು ಕ್ಷೇತ್ರದ ಸಾಧಕರಾಗಿ ಮಾಡಿದ ಸಾಧನೆ ಅನನ್ಯ. ಅವರು ಓರ್ವ ಅಜಾತಶತ್ರು ಎಂದು ಬಣ್ಣಿಸಿದ ಸ್ವಾಮೀಜಿ, ಅವರೊಡನೆ ತಮ್ಮ ಒಡನಾಟಗಳನ್ನು ಸ್ಮರಿಸಿಕೊಂಡರು.
ಈ ಸಂದರ್ಭ ಮಾತೃಶ್ರೀ ಶಾರದಮ್ಮ, ಜ್ಯೋತಿಷಿ ವಿಶ್ವನಾಥ ಭಟ್, ಉಷಾ ಭಟ್, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್ ಭಟ್,ಪ್ರಜ್ವಲ್ ಭಟ್, ರೋಶನಿ ಭಟ್, ರಾಹುಲ್ ಸಿ ಭಟ್, ಆಶ್ರಮದ ಸಂಚಾಲಕ ಪುನೀತ ಕೃಷ್ಣ, ಮುಲ್ಕಿ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ಕಾರ್ಯದರ್ಶಿ ಮೋಹನ್ ಕುಬೆವೂರು, ಸುರೇಶ್ ಶೆಟ್ಟಿ, ಆಶ್ರಮದ ಭದ್ರತಾ ಸಲಹೆಗಾರ ಮಂಜುನಾಥ್ ಗೌಡ್ರು, ಪ್ರದೀಪ್ ಗೌಡ ಮತ್ತಿತರರು ಉಪಸ್ಥಿತರಿದ್ದರು. ಪುನೀತ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಗಣ್ಯರಿಂದ ಸಂತಾಪ
ಡಾ. ನಾರಾಯಣ ಶೆಟ್ಟರ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು. ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ ಕಿನ್ನಿಗೋಳಿ, ಕಾರ್ನಾಡು ಹರಿಹರ ದೇವಸ್ಥಾನದ ಆಡಳಿತ ಮೊಕ್ತೇಸರ ಅರವಿಂದ ಪೂಂಜ,ಯಕ್ಷಗಾನ ರಂಗದ ದಿಗ್ಗಜ ಗಣೇಶ ಕೊಲಕಾಡಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸಂಸ್ಥೆಯ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ,ಶಿಮಂತೂರು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಉದಯ ಕುಮಾರ್ ಶೆಟ್ಟಿ,ಬಾಬಾ ರಂಜನ್ ಶೆಟ್ಟಿ ಮಜಲಗುತ್ತು, ವೇದವ್ಯಾಸ ಉಡುಪ ಕಿನ್ನಿಗೊಳಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡ೦ಗ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಮುಲ್ಕಿ ವಿಜಯ ರೈತ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿ, ಯಕ್ಷಗಾನ ಕಲಾವಿದ ವಿಜಯಕುಮಾರ್ ಶೆಟ್ಟಿ ಮೈಲೊಟ್ಟು, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಾಧರ್ ಶೆಟ್ಟಿ ಬರ್ಕೆ ತೋಟ, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್ ಪುನರೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಕಿನ್ನಿಗೋಳಿ ವಿಜಯ ಕಲಾವಿದರು ಸಂಘಟನೆಯ ಶರತ್ ಶೆಟ್ಟಿ ಕಿನ್ನಿಗೋಳಿ, ಸಾಮಾಜಿಕ ಕಾರ್ಯಕರ್ತರಾದ ಉದಯಕುಮಾರ್ ಶೆಟ್ಟಿ ಶಿಮಂತೂರು, ಪ್ರಾಣೇಶ್ ಹೆಜಮಾಡಿ, ಅಬ್ದುಲ್ ರಜಾಕ್ ಮುಲ್ಕಿ, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ,ವಾಮನ್ ಕೋಟ್ಯಾನ್ ನಡಿಕುದ್ರು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಲ್ಕಿ ಜಯಕರ್ನಾಟಕ ಸಂಘಟನೆಯ ಭಾಸ್ಕರ ಶೆಟ್ಟಿಗಾರ್, ಹರೀಶ್ ಶೆಟ್ಟಿ ಶಿಮಂತೂರು, ಶಿಮಂತೂರು ಯುವಕ ಮಂಡಲ (ರಿ), ಸುಧೀರ್ ಶೆಟ್ಟಿ ಶಿಮಂತೂರು, ಯಕ್ಷಮಿತ್ರರು ಪಂಜಿನಡ್ಕದ ಸುರೇಶ್ ಕೊಲಕಾಡಿ, ಗಣಪತಿ ಭಟ್ ಚೇಳಾಯರು, ಸುಬ್ರಹ್ಮಣ್ಯ ಭಟ್ ಚೇಳಾಯರು,ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.