Saturday, August 13, 2022

Latest Posts

ಛತ್ತೀಸ್​ಘಡನಲ್ಲಿ ಎನ್​ಕೌಂಟರ್: ನಾಲ್ಕು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಸುಕ್ಮಾ: ಛತ್ತೀಸ್​ಘಡದ ಸುಕ್ಮಾ ಜಿಲ್ಲೆಯಲ್ಲಿ ನಾಲ್ವರು ನಕ್ಸಲರನ್ನು ಭದ್ರತಾ ಪಡೆಯ ಸಿಬ್ಬಂದಿ ಎನ್​ಕೌಂಟರ್ ಮಾಡಿದ್ದಾರೆ.
ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಘಟನೆಯಲ್ಲಿ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ.ಈ ಬಗ್ಗೆ ನಕ್ಸಲ್ ನಿಗ್ರಹ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಗಳ ಸಿಬ್ಬಂದಿಗಳು ಎನ್​ಕೌಂಟರ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಭದ್ರತಾಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಘಟನಾ ಸ್ಥಳದಿಂದ 303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ತೀವ್ರಗೊಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss