ಜಿನೀವಾ: ಜಗತ್ತಿನ 10 ಮಂದಿಯ ಪೈಕಿ ಒಬ್ಬರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆಯೇ?
ಹೀಗೊಂದು ಸಂಶಯ ವ್ಯಕ್ತಪಡಿಸಿದೆ ವಿಶ್ವ ಆರೋಗ್ಯ ಸಂಸ್ಥೆ. ವಿಶ್ವ ಆರೋಗ್ಯ ಸಂಸ್ಥೆಯ 34 ಸದಸ್ಯರ ಕಾರ್ಯಕಾರಿ ಮಂಡಳಿ ಕೋವಿಡ್-19ಗೆ ಸಂಬಂಧಿಸಿದಂತೆ ಸೋಮವಾರ ನಡೆಸಿದ ಸಭೆಯಲ್ಲಿ ಡಬ್ಲ್ಯುಎಚ್ಒ ಆರೋಗ್ಯ ತುರ್ತು ಕಾರ್ಯಕ್ರಮಗಳ ಮುಖ್ಯಸ್ಥ ಡಾ.ಮೈಕೆಲ್ ರಯಾನ್ ಮಾತನಾಡಿ, ನಗರ ಮತ್ತು ಗ್ರಾಮೀಣ ಭಾಗಗಳು, ಸಮುದಾಯಗಳ ನಡುವೆ ಪ್ರಕರಣಗಳ ಸಂಖ್ಯೆಯಲ್ಲಿ ವ್ಯತ್ಯಾಸವಿದೆ. ಅಂದರೆ, ಜಗತ್ತಿನಲ್ಲಿ ಹೆಚ್ಚು ಜನರು ಅಪಾಯದ ಸ್ಥಿತಿಯಲ್ಲಿದ್ದಾರೆ. ಅಂದಾಜಿನ ಪ್ರಕಾರ, ಪ್ರಸ್ತುತ ಜಗತ್ತಿನ 760 ಕೋಟಿ ಜನಸಂಖ್ಯೆಯ ಆಧಾರದ ಮೇಲೆ 76 ಕೋಟಿಗೂ ಹೆಚ್ಚು ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಜಗತ್ತಿನ 10 ಮಂದಿಯ ಪೈಕಿ ಒಬ್ಬರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿಯ ಸಂಗ್ರಹಿಸುತ್ತಿರುವ ಕೋವಿಡ್ ದೃಢಪಟ್ಟ ಪ್ರಕರಣಗಳ ಲೆಕ್ಕಕ್ಕಿಂತಲೂ ಅಂದಾಜು ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ.