Wednesday, August 10, 2022

Latest Posts

ಜನಪರ, ಉತ್ತಮ ಆಡಳಿತ ನೀಡಲು ರಾಜ್ಯ ಸರ್ಕಾರ ಬದ್ಧ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಜನಪರ, ಉತ್ತಮ ಆಡಳಿತ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ ಹಿನ್ನೆಲೆ ವಿವಿಧ ಫಲಾನುಭವಿಗಳೊಂದಿಗೆ ಹಮ್ಮಿಕೊಂಡ ಮುಖ್ಯಮಂತ್ರಿಗಳ ಸಂವಾದ ಕಾರ್ಯಕ್ರಮ ಬಳಿಕ ಅವರು ಮಾತನಾಡಿದರು.
ಬರ, ಮಹಾಪೂರ ಹಾಗೂ ಕೋವಿಡ್‌ಗಳಂತಹ ಸಂಕಷ್ಟದ ಪರಿಸ್ಥಿತಿಗಳಲ್ಲಿ ರಾಜ್ಯ ಸರ್ಕಾರ ಎಲ್ಲ ವರ್ಗಗಳಿಗೆ ನ್ಯಾಯ ಒದಗಿಸಿದೆ ಎಂದರು.
ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರಿಗೆ ಸ್ಪಂದಿಸುವ ಕಾರ್ಯ ಪರಿಣಾಮಕಾರಿಯಾಗಿ ಮಾಡಿದ್ದು, ಜಿಲ್ಲೆಯ 9 ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಮುಂದೆ ಬಂದಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಿಗದಿತ ಬಿಲ್ ಆಕರಿಸುವ ಕುರಿತಂತೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರದಿಂದ ಆದೇಶ ಹೊರಬೀಳಲಿದೆ. ಈಗಾಗಲೆ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು ಇದಕ್ಕೆ ಶಾಶ್ವತ ಪರಿಹಾರವೊಂದು ದೊರೆತು ಸಾರ್ವಜನಿಕರಿಂದ ಹೆಚ್ಚಿನ ಚಿಕಿತ್ಸಾ ವೆಚ್ಚ ಪಡೆಯುತ್ತಿರುವಂತಹ ದೂರುಗಳಿಗೆ ಕಡಿವಾಣ ಬೀಳಲಿದೆ ಎಂದು ಹೇಳಿದರು.
ಇಂದು ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಹಿನ್ನೆಲೆಯಲ್ಲಿ ವರ್ಚುವಲ್ ಪ್ಲಾಟ್ ಫಾರಂ ಮೂಲಕ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ ಪಡೆದಿರುವ ಫಲಾನುಭವಿಗಳು, ಕೋವಿಡ್ ಗುಣಮುಖರಾದವರು ಹಾಗೂ ನೆರೆ ಸಂತ್ರಸ್ತರಿಗೆ ಒದಗಿಸಿರುವ ಸೌಲಭ್ಯಗಳ ಕುರಿತು ಸಂವಾದ ನಡೆಸುವ ಮೂಲಕ ಸಾರ್ವಜನಿಕರೊಂದಿಗೆ ಸರ್ಕಾರ ಬೆನ್ನೆಲಬಾಗಿ ನಿಂತಿದ್ದು, ಇಂದು ಕೋವಿಡ್ ಗುಣಮುಖ ಎಂಟು ತಿಂಗಳ ಗರ್ಭಿಣಿ, ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿ ಜಿಲ್ಲೆಯ ಜಿಲ್ಲಾಡಳಿತ, ಆರೋಗ್ಯ ಸಿಬ್ಬಂದಿಗಳು ಮತ್ತು ವೈದ್ಯರು ನೀಡಿರುವ ಸಹಕಾರದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ಕೈಗೊಂಡ ಪರಿಣಾಮಕಾರಿ ಕ್ರಮಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.
ಇಲ್ಲಿನ ಬಸವನಗರ ನಿವಾಸಿ ಪದ್ಮಶ್ರೀ ವನಕುದುರೆ ಅವರೊಂದಿಗೆ ರಾಜ್ಯದಲ್ಲಿಯೇ ಪ್ರಥಮವಾಗಿ, ಮುಖ್ಯಮಂತ್ರಿಗಳು ನೇರ ಸಂವಾದ ನಡೆಸಿದರು.
ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ನಾಗಠಾಣ ಶಾಸಕ ದೇವಾನಂದ ಚವ್ಹಾಹಾಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಅಪರ ಜಿಲಾಧಿಕಾರಿ ಡಾ.ಔದ್ರಾಮ್, ತಹಶೀಲ್ದಾರ್ ಮೋಹನ್‌ಕುಮಾರಿ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss