ಜನರು ‘ಲಾಕ್ ಡೌನ್’ನನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲಿ: ಪ್ರಧಾನಿ ಮೋದಿ

0
33

ಹೊಸದಿಲ್ಲಿ: ಕೊರೋನಾ ಸೋಂಕನ್ನು ತಡೆಯಲು ರಾಜ್ಯಗಳು ಹಲವು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದ್ದು, ದೇಶದಲ್ಲಿನ ಕೆಲವು ಮಂದಿ ಈ ನಿಯಮವನ್ನು ಪಾಲಿಸುತ್ತಿಲ್ಲವೆಂದು ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವು ಜನ ಲಾಕ್ ಡೌನ್ ನನ್ನು ಗಂಭೀರವಾಗಿ ಪರಿಗಣಿಸಿಲ್ಲ, ದಯವಿಟ್ಟು ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ, ನಿಮ್ಮ ಕುಟುಂಬದವರನ್ನು ರಕ್ಷಿಸಿ, ನಿಯಮ ಮತ್ತು ಸಲಹೆಗಳನ್ನು ಗಂಭೀರವಾಗಿ ಪಾಲಿಸಿ. ರಾಜ್ಯ ಸರ್ಕಾರಗಳು ನಿಯಮಗಳನ್ನು ಮತ್ತು ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾನು ವಿನಂತಿಸುತ್ತೇನೆ. ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಬೆಂಗಳೂರು, ಮುಂಬೈ, ಕೊಲ್ಕತ್ತಾ ಸೇರಿದಂತೆ ದೇಶದಲ್ಲಿನ ಹಲವು ರಾಜ್ಯಗಳ 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗಿದೆ.

LEAVE A REPLY

Please enter your comment!
Please enter your name here