Sunday, July 3, 2022

Latest Posts

ಜನವರಿ 2 ರಿಂದ ಎಲ್ಲಾ ರಾಜ್ಯಗಳಲ್ಲೂ ಕೊರೋನಾ ಲಸಿಕೆಯ ಪ್ರಾಯೋಗಿಕ ಸಿದ್ಧತೆ ಶುರು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್-19 ಲಸಿಕೆ ದೇಶದ ಎಲ್ಲಾ ಜನತೆಗೆ ಲಭ್ಯವಾಗುವಂತೆ ದೇಶಾದ್ಯಂತ ಸಿದ್ಧತೆಗಳು ಭರದಿಂದ ಸಾಗಿದ್ದು, ಜನವರಿ 2ರಿಂದ ದೇಶದ ಎಲ್ಲ ರಾಜ್ಯಗಳಲ್ಲಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ಈಗಾಗಲೇ ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಉನ್ನತ ಮಟ್ಟದ ಸಮಿತಿ ಸಭೆಗಳು ನಡೆದಿದ್ದು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್​​ ಮತ್ತು ಗುಜರಾತ್​​​ಗಳಲ್ಲಿ ಡಿಸೆಂಬರ್​ 28 ಮತ್ತು 29 ರಂದು ಕೊರೋನಾ ಲಸಿಕೆ ನೀಡುವ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ತಮ್ಮ ರಾಜಧಾನಿಯನ್ನು ಹೊರತುಪಡಿಸಿ ಪ್ರಮುಖ ನಗರಗಳಲ್ಲಿ ಕೋವಿಡ್-19 ಲಸಿಕೆ ನೀಡುವ ಪ್ರಾಯೋಗಿಕ ಸಿದ್ಧತೆಯನ್ನು ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಜನವರಿ ಎರಡರಿಂದ ಮೂರು ಸೆಷನ್​ಗಳಲ್ಲಿ ಕೊರೋನಾ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜಧಾನಿ ಅಷ್ಟೇ ಅಲ್ಲ ಕಳಪೆ ಲಾಜಿಸ್ಟಿಕ್​ ಸೌಲಭ್ಯ ಇರುವ ಜಿಲ್ಲೆಗಳಲ್ಲೂ ಕೊರೋನಾ ಲಸಿಕೆ ನೀಡುವ ವ್ಯವಸ್ಥೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಸಾಗಿಸಲು ಬೇಕಾದ ವಾಹನ, ಲಸಿಕೆ ಸಂಗ್ರಹಕ್ಕೆ ಬೇಕಾದ ಸೌಲಭ್ಯ ಹಾಗೂ ಕೋ – ವಿನ್ (co-Win )ಆ್ಯಪ್​ ಮೂಲಕ ಅಗತ್ಯ ಡೇಟಾ ಸಂಗ್ರಹಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಈ ಸಂಬಂಧ ರಾಷ್ಟ್ರಮಟ್ಟದಲ್ಲಿ 2,360 ಮಂದಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಇವರು ವಿವಿಧ ಹಂತಗಳಲ್ಲಿ ಲಸಿಕೆ ನೀಡುವ ಕುರಿತು ಮಾರ್ಗದರ್ಶನ ಮಾಡುತ್ತಿದ್ದಾರೆ. 6,81,604 ಮಂದಿ ವೈದ್ಯಕೀಯ ಅಧಿಕಾರಿಗಳನ್ನು ಈ ಉದ್ದೇಶಕ್ಕಾಗಿ ಸಜ್ಜುಗೊಳಿಸಲಾಗಿದೆ. ಲಸಿಕೆ ನೀಡುವ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ತೀವ್ರಗೊಳ್ಳಲಿದೆ. ಲಸಿಕೆ ನೀಡುವ ವೇಳೆ ಎದುರಾಗುವ ಸಮಸ್ಯೆಗಳು, ಸವಾಲುಗಳುಪರೀಕ್ಷೆ ವೇಳೆ ತಿಳಿದುಬರಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss