ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡೆನ್ ಅವರ ಪದಗ್ರಹಣ ಕಾರ್ಯಕ್ರಮ ಜ.20ರಂದು ನಡೆಯಲಿದೆ.
ಅದ್ಯಕ್ಷರ ಅಧಿಕಾರ ಹಸ್ತಾಂತರವು ಶಾಂತಿಯುತವಾಗಿ ನಡೆಯಬೇಕೆಂಬ ಉದ್ದೇಶದಿಂದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದಗ್ರಹಣ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ಭದ್ರತೆಗಾಗಿ 25 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕ್ಯಾಪಿಟಲ್ ಹಿಲ್ ಪ್ರದೇಶವನ್ನು ಸೇನಾ ವಲಯ ಎಂದು ಘೋಷಿಸಲಾಗಿದೆ.